ನವದೆಹಲಿ: ದೀಪಾವಳಿ ಹಬ್ಬದ ಕೊಡುಗೆಯಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆ. ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂ. ಮತ್ತು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 5 ರೂ.ನಷ್ಟು ಕಡಿಮೆ ಮಾಡಲಾಗಿದೆ.
ಕೇಂದ್ರ ಸರ್ಕಾರ ಅಬಕಾರಿ ಸುಂಕ ಕಡಿಮೆ ಮಾಡಿದ್ದು, ರಾಜ್ಯ ಸರ್ಕಾರಗಳು ಮೌಲ್ಯವರ್ಧಿತ ತೆರಿಗೆ(ವ್ಯಾಟ್) ಕಡಿಮೆ ಮಾಡಬೇಕೆಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಒತ್ತಾಯಿಸಿದ್ದಾರೆ.
ಕೇಂದ್ರ ಸರ್ಕಾರ ಅಬಕಾರಿ ಸುಂಕ ಕಡಿತ ಮಾಡಿರುವುದರಿಂದ ಇಂದು ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಪೆಟ್ರೋಲ್ ದರ 5 ರೂಪಾಯಿ, ಡೀಸೆಲ್ ದರ 10 ರೂಪಾಯಿ ಇಳಿಕೆಯಾಗಲಿದೆ. ರಾಜ್ಯಗಳು ಕೂಡ ಇಷ್ಟೇ ಪ್ರಮಾಣದಲ್ಲಿ ವ್ಯಾಟ್ ಕಡಿಮೆ ಮಾಡಿದಲ್ಲಿ ಡೀಸೆಲ್ ದರ 20 ರೂ. ಪೆಟ್ರೋಲ್ ದರ 10 ರೂ. ಕಡಿಮೆಯಾಗಲಿದೆ.
ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅಬಕಾರಿ ಸುಂಕ ಕಡಿತಗೊಳಿಸಿದ ಹಿನ್ನೆಲೆಯಲ್ಲಿ ರಾಜ್ಯಗಳು ವ್ಯಾಟ್ ಕಡಿತಗೊಳಿಸಬೇಕೆಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಎಲ್ಲಾ ರಾಜ್ಯಗಳಿಗೆ ಒತ್ತಾಯಿಸಿದ್ದಾರೆ.