ನವದೆಹಲಿ: ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಇಲ್ಲಿದೆ.
ಸರ್ಕಾರಿ ತೈಲ ಮಾರಾಟ ಸಂಸ್ಥೆಗಳು ಸಬ್ಸಿಡಿ ರಹಿತ ಎಲ್.ಪಿ.ಜಿ. ಸಿಲಿಂಡರ್ ದರವನ್ನು 25 ರೂ. ಹೆಚ್ಚಳ ಮಾಡಿವೆ. ಗುರುವಾರದಿಂದಲೇ ಪರಿಷ್ಕೃತ ದರ ಜಾರಿಗೆ ಬಂದಿದೆ. ದೆಹಲಿಯಲ್ಲಿ 14.2 ಕೆಜಿ ಸಿಲಿಂಡರ್ ದರ 694 ರೂಪಾಯಿಯಿಂದ 719 ರೂಪಾಯಿಗೆ ಹೆಚ್ಚಳವಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ದರ ಗುರುವಾರ ಪ್ರತಿ ಲೀಟರ್ ಗೆ 35 ಪೈಸೆ ಹೆಚ್ಚಳವಾಗಿ 100 ರೂ. ಗಡಿಯತ್ತ ಸಾಗಿದೆ.