ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲದ ದರ ಭಾರಿ ಇಳಿಕೆಯಾಗಿದ್ದು, ದೇಶಿಯವಾಗಿಯೂ ಪೆಟ್ರೋಲ್ ಮತ್ತು ಡೀಸೆಲ್ ದರ ಕಡಿಮೆಯಾಗುವ ಸಾಧ್ಯತೆ ಇದೆ.
ಗುರುವಾರ ಕಚ್ಚಾತೈಲ ದರ ಪ್ರತಿ ಬ್ಯಾರೆಲ್ ಸುಮಾರು 75 ಡಾಲರ್ ಗೆ ಕುಸಿದಿದೆ. ಪರಿಸ್ಥಿತಿ ಇದೇ ರೀತಿ ಮುಂದುವರೆದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಗೆ ಅವಕಾಶ ಸಿಗಲಿದೆ ಎಂದು ಹೇಳಲಾಗಿದೆ.
ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ಭರ್ಜರಿ ಜಯಗಳಿಸಿದೆ. ಇದೇ ಸಂದರ್ಭದಲ್ಲಿ ಕಚ್ಚಾ ತೈಲದ ದರ ಕುಸಿತ ಕಾಣುತ್ತಿದೆ. 2024ರಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಸತತ ಮೂರನೇ ಬಾರಿಗೆ ಅಧಿಕಾರಕ್ಕೇರಲು ಸರ್ಕಾರ ಹಲವು ಜನಪರ ಘೋಷಣೆ, ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಜನವರಿ, ಫೆಬ್ರವರಿಯಲ್ಲಿ ಇಂಧನ ದರ ಇಳಿಕೆಗೆ ಸರ್ಕಾರ ಮುಂದಾಗಲಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.