
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನತೆಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಪೆಟ್ರೋಲ್ ಮತ್ತು ಡೀಸೆಲ್ ಸೇರಿ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರುವ ಕುರಿತು ಇಂದು ಮಹತ್ವದ ಚರ್ಚೆ ನಡೆಯಲಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ತರುವ ಕುರಿತು ಚರ್ಚೆ ನಡೆಸಲಾಗುವುದು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಗೆ ಜಿಎಸ್ಟಿ ವ್ಯಾಪ್ತಿಗೆ ತರಬೇಕೆಂಬ ಒತ್ತಾಯ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಜಿಎಸ್ಟಿ ವ್ಯಾಪ್ತಿಗೆ ತರಲು ಚಿಂತನೆ ನಡೆದಿದೆ.
ಅಂದಹಾಗೇ, ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ ತಂದರೆ ಲೀಟರ್ ಗೆ 30 ರೂ.ವರೆಗೂ ಕಡಿಮೆಯಾಗಲಿದೆ. ಈ ಕಾರಣದಿಂದ ಇಂದಿನ ಜಿಎಸ್ಟಿ ಮಂಡಳಿ ಸಭೆ ಭಾರೀ ಕುತೂಹಲ ಮೂಡಿಸಿದ್ದು, ಎಲ್ಲರ ಗಮನಸೆಳೆದಿದೆ ಎಂದು ಹೇಳಲಾಗಿದೆ.