alex Certify ಜನ ಸಾಮಾನ್ಯರ ಆಸೆಗೆ ತಣ್ಣೀರೆರಚಿದ GST ಮಂಡಳಿ: ಪೆಟ್ರೋಲ್ ಬೆಲೆ 30 ರೂ. ಇಳಿಕೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನ ಸಾಮಾನ್ಯರ ಆಸೆಗೆ ತಣ್ಣೀರೆರಚಿದ GST ಮಂಡಳಿ: ಪೆಟ್ರೋಲ್ ಬೆಲೆ 30 ರೂ. ಇಳಿಕೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್

ಲಖ್ನೋ: ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಇಳಿಕೆಯಾಗಬಹುದು ಎಂದುಕೊಂಡಿದ್ದ ಜನಸಾಮಾನ್ಯರಿಗೆ ನಿರಾಸೆಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ತರಲು ರಾಜ್ಯಗಳು ವಿರೋಧ ವ್ಯಕ್ತಪಡಿಸಿವೆ.

ಲಖ್ನೋದಲ್ಲಿ ನಡೆದ ಜಿಎಸ್ಟಿ ಮಂಡಳಿಯ ಮಹತ್ವದ ಸಭೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ತರಲು ಎಲ್ಲಾ ರಾಜ್ಯಗಳು ವಿರೋಧ ವ್ಯಕ್ತಪಡಿಸಿವೆ. ಆದಾಯ ಕೊರತೆ ಕಾರಣದಿಂದಾಗಿ ವಿರೋಧ ವ್ಯಕ್ತಪಡಿಸಿವೆ. ಭಾರಿ ಏರಿಕೆಯಾಗಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಕೆ ಮಾಡಲು ಜಿಎಸ್ಟಿ ವ್ಯಾಪ್ತಿಗೆ ತರಬೇಕು ಎಂಬ ಒತ್ತಾಯ ಹೆಚ್ಚಾಗಿತ್ತು. ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ ತಂದರೆ ಲೀಟರ್ ಗೆ 30 ರೂ.ವರೆಗೂ ಕಡಿಮೆಯಾಗಲಿದೆ ಎನ್ನಲಾಗಿತ್ತು. ಆದರೆ, ರಾಜ್ಯಗಳು ವಿರೋಧ ವ್ಯಕ್ತಪಡಿಸಿದ್ದರಿಂದ ಜಿಎಸ್ಟಿ ಮಂಡಳಿ ಸಭೆಯಲ್ಲಿ ಸದ್ಯಕ್ಕೆ ಪೆಟ್ರೋಲ್, ಡೀಸೆಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ಸೇರಿಸದಿರಲು ತೀರ್ಮಾನಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...