ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದದಿಂದ ಕೇಂದ್ರ ಸರ್ಕಾರಕ್ಕೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಸೇರಿದಂತೆ ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು ಮತದಾರರನ್ನು ಸೆಳೆಯಲು ದರ ಇಳಿಸುವ ಒತ್ತಡದಲ್ಲಿ ಸರ್ಕಾರ ಇದೆ.
ಉತ್ಪಾದನೆ ಕಡಿಮೆಯಾದ ಹಿನ್ನಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಕಚ್ಚಾತೈಲದ ಬೆಲೆ ಏರಿಕೆಯಾಗಿರುವುದರಿಂದ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇದರ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಾಗಿ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಪೆಟ್ರೋಲ್ ಮೇಲಿನ ಸುಂಕವನ್ನು ಕಡಿತಗೊಳಿಸಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಪೆಟ್ರೋಲ್ ಮತ್ತು ಡೀಸೆಲ್ ನ ಮೂಲ ಬೆಲೆಗಿಂತ ತೆರಿಗೆ ಭಾರವೇ ಅಧಿಕವಾಗಿದೆ. ತೆರಿಗೆ ಕಡಿತಗೊಳಿಸಬೇಕು ಎಂಬ ಒತ್ತಾಯ ಇದೆ. ಜಾಗತಿಕವಾಗಿ ಬೆಲೆ ಏರಿಕೆಯಾಗುತ್ತಿದ್ದರೂ 10 ದಿನದಿಂದ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಚುನಾವಣೆ ಕಾರಣದಿಂದ ಸದ್ಯಕ್ಕೆ ದರ ಹೆಚ್ಚಳ ಮಾಡುವುದಿಲ್ಲ. ನಂತರದಲ್ಲಿ ಒಮ್ಮೆಲೆ ದರ ಹೆಚ್ಚಳ ಮಾಡಬಹುದು. ಸದ್ಯದ ಪರಿಸ್ಥಿತಿಯಲ್ಲಿ ಮತದಾರರನ್ನು ಸೆಳೆಯಲು ಪೆಟ್ರೋಲ್ ದರ ಇಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.