ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯನ್ನು ಇಳಿಕೆ ಮಾಡಲು ಕೇಂದ್ರ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡುವ ಕುರಿತು ಚಿಂತನೆ ನಡೆದಿದೆ.
ಪೆಟ್ರೋಲಿಯಂ ಸಚಿವಾಲಯದಿಂದ ಇಂಧನ ದರ ಇಳಿಕೆ ಬಗ್ಗೆ ಆಸಕ್ತಿ ತೋರಲಾಗಿದೆ. ಆರ್ಥಿಕ ಸಚಿವಾಲಯ ಇದರ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಬೇಕಿದೆ. ತೀರಾ ಅಗತ್ಯ ಇರುವವರಿಗೆ ಎಲ್ಪಿಜಿ ಸಬ್ಸಿಡಿ ನೀಡುವ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆ ಇಳಿಕೆ ಮಾಡುವ ಬಗ್ಗೆ ಪೆಟ್ರೋಲಿಯಂ ಸಚಿವಾಲಯ ಆಸಕ್ತಿ ತೋರಿದೆ ಎಂದು ಹೇಳಲಾಗಿದೆ.