ನವದೆಹಲಿ: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ 9ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ.
ತೈಲ ಬೆಲೆ ಏರಿಕೆ ವಿರುದ್ಧ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ನಡುವೆಯೇ ತೈಲದ ಬೆಲೆ ಏರಿಕೆ ಪೈಸೆಗಳ ಲೆಕ್ಕದಲ್ಲಿ ಏರಿಕೆಯಾಗಿ 100 ರೂ. ಸನಿಹಕ್ಕೆ ಬಂದಿದೆ.
ಇವತ್ತು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ತಲಾ 25 ಪೈಸೆಯಷ್ಟು ಹೆಚ್ಚಳವಾಗಿದೆ. ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ದರ 89.54 ರೂ., ಡೀಸೆಲ್ ದರ 79.95 ರೂ.ತಲುಪಿದೆ. ಸಾಗಣೆ ವೆಚ್ಚ ಮತ್ತು ವ್ಯಾಟ್ ತೆರಿಗೆ ಮೊದಲಾದ ಕಾರಣದಿಂದ ರಾಜ್ಯಗಳಲ್ಲಿ ತೈಲ ದರದಲ್ಲಿ ವ್ಯತ್ಯಾಸವಿರುತ್ತದೆ.