ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ಶೀಘ್ರವೇ ಏರಿಕೆ ಆಗುವ ಸಾಧ್ಯತೆ ಇದೆ. ಅಂದಹಾಗೆ, 5 ರಾಜ್ಯಗಳ ವಿಧಾನಸಭೆ ಚುನಾವಣೆ ಘೋಷಣೆಯಾಗಿದ್ದು ಈಗಾಗಲೇ ಕೆಲವು ರಾಜ್ಯಗಳಲ್ಲಿ ಚುನಾವಣೆ ಮುಗಿದಿದೆ. ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಡೆಯುತ್ತಿದ್ದು ಈ ವಿಧಾನಸಭೆ ಚುನಾವಣೆ ಮುಗಿದ ನಂತರ ತೈಲಬೆಲೆಯಲ್ಲಿ ದಿಢೀರ್ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಪ್ರತಿ ಲೀಟರ್ ಗೆ 2 ರಿಂದ 3 ರೂಪಾಯಿ ದರ ಏರಿಕೆಯಾಗಬಹುದು. ಸದ್ಯಕ್ಕೆ ತೈಲಕಂಪನಿಗಳು ದರ ಏರಿಕೆ ತಡೆಹಿಡಿದಿದ್ದು, ಚುನಾವಣೆ ಮುಗಿದ ಕೂಡಲೇ ದರ ಏರಿಕೆಯಾಗಲಿದೆ. ಫೆಬ್ರವರಿ 27 ರಿಂದ ಡೀಸೆಲ್ ಮತ್ತು ಪೆಟ್ರೋಲ್ ದರ ಏರಿಕೆಯಾಗಿಲ್ಲ. ಮಾರ್ಚ್ ಮತ್ತು ಏಪ್ರಿಲ್ ನಲ್ಲಿ 4 ಬಾರಿ ಇಳಿಕೆ ಮಾಡಲಾಗಿದೆ.
ಒಂದು ತಿಂಗಳಿಗೂ ಹೆಚ್ಚು ಅವಧಿಯಿಂದ ದರ ಹೆಚ್ಚಳ ತಡೆಹಿಡಿದ ತೈಲಕಂಪನಿಗಳು ಚುನಾವಣೆ ಮುಗಿಯುತ್ತಿದ್ದಂತೆ ದರ ಹೆಚ್ಚಳ ಮಾಡುವ ಸಾಧ್ಯತೆ ದಟ್ಟವಾಗಿದೆ.