
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತೆ ಏರಿಕೆಯಾಗುವ ಸಾಧ್ಯತೆ ಇದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆಯಾಗಿದ್ದರೂ ಕೂಡ ದೇಶದಲ್ಲಿ ಕಳೆದ ಸುಮಾರು ಎರಡು ತಿಂಗಳಿನಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗದೆ ಯಥಾಸ್ಥಿತಿಯಲ್ಲಿದೆ.
5 ರಾಜ್ಯಗಳ ವಿಧಾನಸಭೆ ಚುನಾವಣೆ ಮುಗಿದಿದ್ದು, ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ. ಮೇ 2 ರ ನಂತರ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗುವ ಸಾಧ್ಯತೆ ಇದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆಯಾಗಿದ್ದರೂ ದೇಶಿಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆ ಮಾಡಿರಲಿಲ್ಲ. 5 ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಮುಗಿಯುತ್ತಿದ್ದಂತೆ ಜಾಗತಿಕ ಮಾರುಕಟ್ಟೆಯ ಕಚ್ಚಾ ತೈಲ ಬೆಲೆಗೆ ಅನುಗುಣವಾಗಿ ನಷ್ಟ ಸರಿದೂಗಿಸಲು ದೇಶಿಯ ಮಾರುಕಟ್ಟೆಯಲ್ಲಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಲಿವೆ ಎಂದು ಹೇಳಲಾಗಿದೆ.