ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಂದು ಕೂಡ ಮತ್ತೆ ಏರಿಕೆ ಮಾಡಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ ಗೆ 35 ಪೈಸೆ ಹೆಚ್ಚಳ ಮಾಡಲಾಗಿದೆ.
ದರ ಪರಿಷ್ಕರಣೆ ನಂತರ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 106.54 ರೂ., ಡೀಸೆಲ್ ಬೆಲೆ 95.27 ರೂ. ಆಗಿದೆ.
ಮುಂಬೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 112.44 ರೂ. ಮತ್ತು ಡೀಸೆಲ್ 103.26 ರೂ.ಗೆ ಏರಿದೆ.
ಕೋಲ್ಕತಾದಲ್ಲಿ ಪೆಟ್ರೋಲ್ ದರ 107.12 ರೂ., ಡೀಸೆಲ್ 98.38 ರೂ. ಇದೆ.
ಚೆನ್ನೈನಲ್ಲಿ ಪೆಟ್ರೋಲ್ 103.61 ರೂ., ಡೀಸೆಲ್ ದರ 99.59 ರೂ. ಇದೆ.
ದಿನೇ ದಿನೇ ಪೈಸೆಗಳ ಲೆಕ್ಕದಲ್ಲಿ ಏರಿಕೆ ಕಂಡ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿದೆ. ಮೊದಲೇ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನರಿಗೆ ತೈಲ ಬೆಲೆ ದಿನೇ ದಿನೇ ಏರಿಕೆಯಾಗುತ್ತಿರುವುದು ನುಂಗಲಾರದ ತುತ್ತಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಬೆಳವಣಿಗೆ ಆಧರಿಸಿ ದೇಶೀಯ ಮಾರುಕಟ್ಟೆಯಲ್ಲಿ ದರ ಪರಿಷ್ಕರಣೆ ಮಾಡಲಾಗುವುದು.