
ನವದೆಹಲಿ: ಈಗಾಗಲೇ ಶತಕ ಬಾರಿಸಿ ಮುನ್ನುಗ್ಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಮುಖಿಯಾಗಿವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇವತ್ತು ಕೂಡ ಏರಿಕೆ ಮಾಡಲಾಗಿದೆ.
ತೈಲಕಂಪನಿಗಳು ಇಂಧನ ದರ ಪರಿಷ್ಕರಣೆ ಮಾಡಿವೆ. ಭಾರತೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 27 ಪೈಸೆ ಮತ್ತು ಡೀಸೆಲ್ ಪ್ರತಿ ಲೀಟರ್ ಗೆ 23 ಪೈಸೆಯಷ್ಟು ಹೆಚ್ಚಳ ಮಾಡಲಾಗಿದೆ.
ಜೂನ್ 12 ರಂದು ಶನಿವಾರ ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ 96.12 ರೂ., ಡೀಸೆಲ್ ದರ 86.98 ರೂ. ಇದೆ. ಮುಂಬೈನಲ್ಲಿ ಪೆಟ್ರೋಲ್ ದರ 102.30 ರೂ., ಡೀಸೆಲ್ ದರ 94.39 ರೂ. ಇದೆ.