ನವದೆಹಲಿ: ಕಳೆದ 21 ದಿನಗಳಿಂದ ನಿರಂತರವಾಗಿ ಏರಿಕೆ ಕಾಣುತ್ತಿದ್ದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆ ಆಗಿಲ್ಲ.
ದೈನಂದಿನ ದರ ಪರಿಷ್ಕರಣೆ ನಡುವೆ ಕಳೆದ 21 ದಿನಗಳ ಅವಧಿಯಲ್ಲಿ ಪೆಟ್ರೋಲ್ ಲೀಟರ್ ಗೆ 9.12 ರೂಪಾಯಿ, ಡೀಸೆಲ್ ಲೀಟರ್ ಗೆ 10.77 ರೂಪಾಯಿ ಜಾಸ್ತಿಯಾಗಿದೆ. ಇಂದು ದರ ಪರಿಷ್ಕರಣೆ ಮಾಡಿಲ್ಲ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಯಥಾಸ್ಥಿತಿಯಲ್ಲಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ ಗೆ 80.38 ರೂ., ಡೀಸೆಲ್ ಲೀಟರ್ ಗೆ 80.40 ರೂ. ಇದೆ ಎಂದು ಹೇಳಲಾಗಿದೆ.