ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಹೆಚ್ಚಿಸಿವೆ. ಡೀಸೆಲ್ ಬೆಲೆ ಲೀಟರ್ ಗೆ 28 ರಿಂದ 30 ಪೈಸೆ ಹೆಚ್ಚಿಸಿದ್ದು, ಪೆಟ್ರೋಲ್ ಬೆಲೆ ಲೀಟರ್ ಗೆ 26 ರಿಂದ 27 ಪೈಸೆ ಏರಿಕೆಯಾಗಿದೆ.
ದೆಹಲಿಯಲ್ಲಿ ಪೆಟ್ರೋಲ್ ಬೆಲೆ 96.93 ರೂ., ಡೀಸೆಲ್ ಬೆಲೆ ಲೀಟರ್ಗೆ 87.69 ರೂ., ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.08 ರೂ. ಮತ್ತು ಡೀಸೆಲ್ ಬೆಲೆ ಲೀಟರ್ಗೆ 95.14 ರೂ. ಇದೆ. ಒಂದು ತಿಂಗಳಲ್ಲಿ 27 ನೇ ಬಾರಿಗೆ ವಾಹನ ಇಂಧನ ಬೆಲೆಯನ್ನು ಹೆಚ್ಚಿಸಿದ ನಂತರ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೊಸ ಗರಿಷ್ಠ ಮಟ್ಟವನ್ನು ತಲುಪಿದೆ.
ರಾಜಸ್ಥಾನದಲ್ಲಿ ಡೀಸೆಲ್ ಬೆಲೆ ಲೀಟರ್ಗೆ 100 ರೂ. ತಲುಪಿದ್ದರೆ, ಕರ್ನಾಟಕ ಪೆಟ್ರೋಲ್ ದರ ಶತಕ ಬಾರಿಸಿದ ರಾಜ್ಯಗಳ ಸಾಲಿಗೆ ಸೇರಿದ ದೇಶದ 7 ನೇ ರಾಜ್ಯವಾಗಿದೆ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್ಗೆ ಸುಮಾರು 100 ರೂ.ಯಷ್ಟು ಇದೆ. ಕಳೆದ 27 ದಿನಗಳಲ್ಲಿ ಮೇ 4 ರಿಂದ ಇಲ್ಲಿಯವರೆಗೆ ಪೆಟ್ರೋಲ್ ಬೆಲೆ 6.57 ರೂ. ಮತ್ತು ಡೀಸೆಲ್ ಲೀಟರ್ಗೆ 6.96 ರೂ.ಹೆಚ್ಚಾಗಿದೆ.