ನವದೆಹಲಿ: ಒಂದು ದಿನದ ಸ್ಥಿರತೆಯ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಇಂಧನ ಬೆಲೆಯಲ್ಲಿ ಹೆಚ್ಚಳ ಮಾಡಿವೆ.
ದೇಶದ ಹಲವು ನಗರಗಳಲ್ಲಿ ಪೆಟ್ರೋಲ್ ಬೆಲೆ 100 ರೂಪಾಯಿ ಗಡಿದಾಟಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಾರ ಇಂದು ಪೆಟ್ರೋಲ್ ದರ ಲೀಟರ್ ಗೆ 15 ರಿಂದ 17 ಪೈಸೆಯಷ್ಟು ಹೆಚ್ಚಳವಾಗಿದೆ. ಅದೇ ರೀತಿ ಡೀಸೆಲ್ ಬೆಲೆ ಲೀಟರಿಗೆ 25 ರಿಂದ 29 ಹೆಚ್ಚಳವಾಗಿದೆ.
ಬೆಲೆ ಏರಿಕೆ ನಂತರ ರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 93.21 ರೂಪಾಯಿ ಡೀಸೆಲ್ ದರ 84.07 ರೂಪಾಯಿ ಇದೆ. 12 ದಿನಗಳ ಅವಧಿಯಲ್ಲಿ ಪೆಟ್ರೋಲ್ ಬೆಲೆ 2.69 ರೂ., ಡೀಸೆಲ್ ದರ 3.07 ರೂಪಾಯಿ ಹೆಚ್ಚಳವಾಗಿದೆ.