alex Certify ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್: ಇವತ್ತೂ ಏರಿಕೆಯಾಯ್ತು ಪೆಟ್ರೋಲ್, ಡೀಸೆಲ್ ದರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್: ಇವತ್ತೂ ಏರಿಕೆಯಾಯ್ತು ಪೆಟ್ರೋಲ್, ಡೀಸೆಲ್ ದರ

ನವದೆಹಲಿ: ಒಂದು ದಿನದ ಸ್ಥಿರತೆಯ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಇಂಧನ ಬೆಲೆಯಲ್ಲಿ ಹೆಚ್ಚಳ ಮಾಡಿವೆ.

ದೇಶದ ಹಲವು ನಗರಗಳಲ್ಲಿ ಪೆಟ್ರೋಲ್ ಬೆಲೆ 100 ರೂಪಾಯಿ ಗಡಿದಾಟಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಾರ ಇಂದು ಪೆಟ್ರೋಲ್ ದರ ಲೀಟರ್ ಗೆ 15 ರಿಂದ 17 ಪೈಸೆಯಷ್ಟು ಹೆಚ್ಚಳವಾಗಿದೆ. ಅದೇ ರೀತಿ ಡೀಸೆಲ್ ಬೆಲೆ ಲೀಟರಿಗೆ 25 ರಿಂದ 29 ಹೆಚ್ಚಳವಾಗಿದೆ.

ಬೆಲೆ ಏರಿಕೆ ನಂತರ ರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 93.21 ರೂಪಾಯಿ ಡೀಸೆಲ್ ದರ 84.07 ರೂಪಾಯಿ ಇದೆ. 12 ದಿನಗಳ ಅವಧಿಯಲ್ಲಿ ಪೆಟ್ರೋಲ್ ಬೆಲೆ 2.69 ರೂ., ಡೀಸೆಲ್ ದರ 3.07 ರೂಪಾಯಿ ಹೆಚ್ಚಳವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...