ನವದೆಹಲಿ: ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲಿ ಸಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದ್ದು, ಲೀಟರ್ಗೆ 25 ಪೈಸೆಯಷ್ಟು ಹೆಚ್ಚಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆಯನ್ನು 25 ಪೈಸೆ ಹೆಚ್ಚಳ ಮಾಡಲಾಗಿದ್ದು, ಲೀಟರ್ಗೆ 84.45 ರೂಪಾಯಿ ಇದೆ. ಅದೇ ರೀತಿ ಡೀಸೆಲ್ ಬೆಲೆ 74.63 ರೂ.ಗೆ ಏರಿಕೆ ಕಂಡಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ತಿಳಿಸಿದೆ.
ದೇಶದ ಮಹಾನಗರ ಮುಂಬೈನಲ್ಲಿ ಪರಿಷ್ಕೃತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ 91.07 ಹಾಗೂ 81.34 ರೂಪಾಯಿ ಆಗಿದೆ.
ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ವಿದೇಶಿ ವಿನಿಮಯ ದರಗಳಲ್ಲಿನ ಬದಲಾವಣೆಯನ್ನು ಪರಿಗಣಿಸಿ ಇಂಧನ ಬೆಲೆಯನ್ನು ಪರಿಷ್ಕರಿಸುತ್ತವೆ. ಮೌಲ್ಯವರ್ಧಿತ ತೆರಿಗೆ ಅಥವಾ ವ್ಯಾಟ್ ನಿಂದಾಗಿ ದೇಶದಲ್ಲಿ ಇಂಧನ ದರಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತದೆ.
ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರ ಕ್ರಮವಾಗಿ
ದೆಹಲಿಯಲ್ಲಿ 84.45 ರೂ., 74 63 ರೂ.
ಮುಂಬೈನಲ್ಲಿ 91.07 ರೂ., 81.34 ರೂ.
ಚೆನ್ನೈನಲ್ಲಿ 87.18 ರೂ., 79.95 ರೂ.
ಕೊಲ್ಕೊತ್ತಾದಲ್ಲಿ 85.92 ರೂ., 78.22 ರೂ.