ನವದೆಹಲಿ: ನಿನ್ನೆ 80 ಪೈಸೆಯಷ್ಟು ಏರಿಕೆ ಕಂಡಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಂದು ಕೂಡ ಏರಿಕೆ ಮಾಡಲಾಗಿದೆ.
ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 80 ಪೈಸೆ ಹೆಚ್ಚಾಗಿದೆ. ದೆಹಲಿಯಲ್ಲಿ ಕ್ರಮವಾಗಿ ಲೀಟರ್‌ಗೆ 97.01 ಮತ್ತು ಲೀಟರ್ ಗೆ 88.27 ರೂ. ಇದೆ.
ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಮುಂಬೈನಲ್ಲಿ 111.67 ರೂ. ಮತ್ತು 95.85 ರೂ. ಇದೆ. (85 ಪೈಸೆ ಹೆಚ್ಚಾಗಿದೆ).
ದರ ಪರಿಷ್ಕರಣೆಯಲ್ಲಿ ನಾಲ್ಕೂವರೆ ತಿಂಗಳ ವಿರಾಮದ ನಂತರ ಸತತ ಎರಡನೇ ದಿನವಾದ ಬುಧವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಲೀಟರ್‌ಗೆ ತಲಾ 80 ಪೈಸೆಗಳಷ್ಟು ಏರಿಕೆಯಾಗಿದೆ.