ನವದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ. ಪೈಸೆಗಳ ಲೆಕ್ಕದಲ್ಲಿ ಏರಿಕೆಯಾದ ಪೆಟ್ರೋಲ್ ಮತ್ತು ಡೀಸೆಲ್ ದರ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೇರಿದ್ದು, ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ಮತ್ತೆ ದರ ಏರಿಕೆ ಮಾಡಲಾಗಿದೆ.
ದೆಹಲಿಯಲ್ಲಿ ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 30 ಪೈಸೆ ಹೆಚ್ಚಿಸಿದ್ದು, ಡೀಸೆಲ್ ಪ್ರತಿ ಲೀಟರ್‌ಗೆ 35 ಪೈಸೆ ಹೆಚ್ಚಳ ಮಾಡಲಾಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಹೇಳಿದೆ.
ದೆಹಲಿಯಲ್ಲಿ ಪೆಟ್ರೋಲ್ 102.94 ರೂ., ಡೀಸೆಲ್ 91.42 ರೂ.
ಮುಂಬೈನಲ್ಲಿ ಪೆಟ್ರೋಲ್ 108.96 ರೂ., ಡೀಸೆಲ್ 99.17 ರೂ.
ಚೆನ್ನೈನಲ್ಲಿ ಪೆಟ್ರೋಲ್ 100.49 ರೂ., ಡೀಸೆಲ್ 95.93 ರೂ.
ಕೊಲ್ಕೊತ್ತಾ ಪೆಟ್ರೋಲ್ 103.65 ರೂ., ಡೀಸೆಲ್ 94.53 ರೂ. ಇದೆ.
ಮೌಲ್ಯವರ್ಧಿತ ತೆರಿಗೆ ಅಥವಾ ವ್ಯಾಟ್ ನಿಂದಾಗಿ ಇಂಧನ ದರಗಳು ರಾಜ್ಯದಾದ್ಯಂತ ಬದಲಾಗುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂನಂತಹ ಸರ್ಕಾರಿ ತೈಲ ಸಂಸ್ಕರಣಾ ಘಟಕಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲ ಬೆಲೆ ಮತ್ತು ರೂಪಾಯಿ-ಡಾಲರ್ ವಿನಿಮಯ ದರಗಳನ್ನು ಗಣನೆಗೆ ತೆಗೆದುಕೊಂಡು ಇಂಧನ ದರವನ್ನು ಪ್ರತಿದಿನ ಪರಿಷ್ಕರಿಸುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳನ್ನು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದಲೇ ಜಾರಿಗೆ ತರಲಾಗುತ್ತದೆ.