ನವದೆಹಲಿ: ಕಳೆದ ತಿಂಗಳು ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 10 ರೂ., ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 13 ರೂ. ಏರಿಕೆ ಮಾಡಿದ್ದು, ಲಾಕ್ ಡೌನ್ ಸಂದರ್ಭದಲ್ಲಿ ಬಹುತೇಕ ರಾಜ್ಯಗಳು ಇಂಧನ ದರದ ಮೇಲಿನ ತೆರಿಗೆಯನ್ನು ಹೆಚ್ಚಿಸಿದ್ದವು.
ಲಾಕ್ ಡೌನ್ ಘೋಷಣೆಯಾದ ನಂತರ ದೇಶಾದ್ಯಂತ ಮೊದಲ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಮಾರಾಟ ದರ ಹೆಚ್ಚಳ ಮಾಡಲಾಗಿದೆ.
ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಮಾರಾಟ ದರವನ್ನು ಪ್ರತಿ ಲೀಟರಿಗೆ 60 ಪೈಸೆಯಷ್ಟು ಏರಿಕೆ ಮಾಡಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಲೀಟರ್ಗೆ 71.86 ರೂಪಾಯಿ, ಡೀಸೆಲ್ ಲೀಟರ್ಗೆ 69.99 ರೂ. ದರ ಇದೆ.