ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಸಂಬಂಧಿಸಿದಂತೆ ಗ್ರಾಹಕರಿಗೆ ಒಳ್ಳೆಯ ಸುದ್ದಿ ಇಲ್ಲಿದೆ. ಮುಂದಿನ ತಿಂಗಳುಗಳಲ್ಲಿ ಇಂಧನ ಬೆಲೆಗಳನ್ನು ಕಡಿತಗೊಳಿಸುವ ಸಾಧ್ಯತೆ ಇದೆ.
ನವೆಂಬರ್-ಡಿಸೆಂಬರ್ ನಿಂದ ನಡೆಯುವ ಪ್ರಮುಖ ರಾಜ್ಯಗಳ ಚುನಾವಣೆಗಳನ್ನು ಗಮನಿಸಿದರೆ ತೈಲ ಮಾರುಕಟ್ಟೆ ಕಂಪನಿಗಳು ಆಗಸ್ಟ್ ನಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 4-5 ರೂ. ಕಡಿತಗೊಳಿಸುವ ಸಾಧ್ಯತೆಯಿದೆ.
ನವೆಂಬರ್-ಡಿಸೆಂಬರ್‌ನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳ ಕಾರಣ, ತೈಲ ಮಾರುಕಟ್ಟೆ ಕಂಪನಿಗಳು ಆಗಸ್ಟ್ ನಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 4-5 ರೂ. ಕಡಿತಗೊಳಿಸಬಹುದು. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಕಡಿಮೆಯಾಗಿರುವುದರಿಂದ ತೈಲ ಸಚಿವಾಲಯ OMCಗಳನ್ನು ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಕಡಿತಗೊಳಿಸುವಂತೆ ಕೇಳಬಹುದು.