ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಕೊಲ್ಕತ್ತಾದಲ್ಲಿ ಪೆಟ್ರೋಲ್ ದರ 100 ರೂಪಾಯಿ ಗಡಿ ದಾಟಿದೆ. ಈಗಾಗಲೇ ದೇಶದ ಬಹುತೇಕ ಭಾಗದಲ್ಲಿ ಪೆಟ್ರೋಲ್ ದರ ಶತಕ ಬಾರಿಸಿದ್ದು, ರಾಷ್ಟ್ರರಾಜಧಾನಿಯಲ್ಲಿಯೂ ಶತಕ ಬಾರಿಸಿದೆ.
ಇಂದು ದರ ಪರಿಷ್ಕರಣೆ ಮಾಡಿದ ನಂತರ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 100 ರೂಪಾಯಿ ಗಡಿದಾಟಿದೆ. ಪೆಟ್ರೋಲ್ ಪ್ರತಿ ಲೀಟರ್ ಗೆ 31 ರಿಂದ 39 ಪೈಸೆಯಷ್ಟು ಹಾಗೂ ಡೀಸೆಲ್ ಪ್ರತಿ ಲೀಟರ್ ಗೆ 16 ರಿಂದ 23 ಪೈಸೆಯಷ್ಟು ಹೆಚ್ಚಳವಾಗಿದೆ.
ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರ ಐತಿಹಾಸಿಕ ಗರಿಷ್ಠ ಮಟ್ಟ ತಲುಪಿದೆ. ಕಳೆದ ಎರಡು ತಿಂಗಳಲ್ಲಿ 36 ಸಲ ಪೆಟ್ರೋಲ್ ಬೆಲೆ ಏರಿಕೆಯಾಗಿದೆ.