alex Certify ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಐತಿಹಾಸಿಕ ಗರಿಷ್ಠ ಮಟ್ಟಕ್ಕೇರಿದ ಪೆಟ್ರೋಲ್, ಡೀಸೆಲ್ ದರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಐತಿಹಾಸಿಕ ಗರಿಷ್ಠ ಮಟ್ಟಕ್ಕೇರಿದ ಪೆಟ್ರೋಲ್, ಡೀಸೆಲ್ ದರ

ನವದೆಹಲಿ: ಒಂದು ದಿನದ ವಿರಾಮದ ನಂತರ ಪೆಟ್ರೋಲ್ ಬೆಲೆಯನ್ನು ಮತ್ತೆ 23 ರಿಂದ 26 ಪೈಸೆ ಹೆಚ್ಚಿಸಲಾಗಿದೆ. ಡೀಸೆಲ್ ದರ 6 ರಿಂದ 7 ಪೈಸೆ ಹೆಚ್ಚಿಸಿದ್ದು, ದೇಶಾದ್ಯಂತ ಇಂಧನ ಬೆಲೆ ಐತಿಹಾಸಿಕ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ.

ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆ ಪ್ರಕಾರ, ಮುಂಬೈನಲ್ಲಿ ಪೆಟ್ರೋಲ್ ಬೆಲೆ ಸಾರ್ವಕಾಲಿಕ ಗರಿಷ್ಠ 103.89 ರೂ.ಗೆ ತಲುಪಿದೆ. ಡೀಸೆಲ್ ಚಿಲ್ಲರೆ ವ್ಯಾಪಾರ ದರ 7 ಪೈಸೆ ಏರಿಕೆಯಾಗಿ 95.79 ರೂ.ಗೆ ಏರಿಕೆಯಾಗಿದೆ.

ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಕ್ರಮವಾಗಿ 26 ಪೈಸೆ ಮತ್ತು 7 ಪೈಸೆ ಹೆಚ್ಚಾಗಿದೆ. ಬೆಲೆ ಏರಿಕೆಯ ನಂತರ ರಾಷ್ಟ್ರ ರಾಜಧಾನಿಯಲ್ಲಿ ಲೀಟರ್ ಪೆಟ್ರೋಲ್ ದರ 97.76 ರೂ., ಡೀಸೆಲ್ 88.30 ರೂ. ಆಗಿದೆ.

ಚೆನ್ನೈನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕ್ರಮವಾಗಿ 23 ಪೈಸೆ ಮತ್ತು 6 ಪೈಸೆ ಏರಿಕೆಯಾಗಿ ಪೆಟ್ರೋಲ್ ಬೆಲೆ ಲೀಟರ್ಗೆ 98.88 ರೂ., ಡೀಸೆಲ್ ಬೆಲೆ ಲೀಟರ್ಗೆ 92.89 ರೂ. ಆಗಿದೆ.

ಸ್ಥಳೀಯ ತೆರಿಗೆಗಳಾದ ವ್ಯಾಟ್ ಮತ್ತು ಸರಕು ಶುಲ್ಕದ ಆಧಾರದ ಮೇಲೆ ಇಂಧನ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತದೆ. ಈ ಕಾರಣದಿಂದಾಗಿ, 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ಗಳಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 100 ರೂ.ಗಿಂತಲೂ ಜಾಸ್ತಿಯಾಗಿದೆ.

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ರಾಜಸ್ಥಾನ ಅತಿ ಹೆಚ್ಚು ವ್ಯಾಟ್ ವಿಧಿಸುತ್ತಿದ್ದು, ನಂತರದ ಸ್ಥಾನದಲ್ಲಿ ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...