
ನವದೆಹಲಿ: ಬುಧವಾರ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಹೆಚ್ಚಳವಾಗಿದೆ. 18 ದಿನಗಳ ನಂತರ ಮಂಗಳವಾರ ಮೊದಲ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡಲಾಗಿತ್ತು.
ಬುಧವಾರವೂ ಇಂಧನ ಬೆಲೆ ಏರಿಕೆಯಾಗಿದೆ. ಪೆಟ್ರೋಲ್ ಪ್ರತಿ ಲೀಟರಿಗೆ 22 ಪೈಸೆ ಮತ್ತು ಡೀಸೆಲ್ ಪ್ರತಿ ಲೀಟರಿಗೆ 39 ಪೈಸೆಯಷ್ಟು ಹೆಚ್ಚಳವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ 90.74 ರೂ., ಡಿಸೆಲ್ 81.12 ರೂ. ದರ ಇದೆ.
ಸಾಗಣೆ ವೆಚ್ಚ, ಸ್ಥಳೀಯ ಮಾರಾಟ ತೆರಿಗೆ ಸೇರಿ ಆಯಾ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಬದಲಾವಣೆಗೊಳಪಟ್ಟಿರುತ್ತದೆ. ಕೊರೋನಾ ಸಂಕಷ್ಟದ ಹೊತ್ತಲ್ಲಿ ಇಂಧನ ಬೆಲೆ ಏರಿಕೆಯಾಗಿದೆ. ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಡೀಸೆಲ್ ದರ ಹೆಚ್ಚಳವಾಗಿರುವುದರಿಂದ ಸಾಗಣೆ ವೆಚ್ಚ ಜಾಸ್ತಿಯಾಗಿ ಬೆಲೆ ಇನ್ನಷ್ಟು ಏರಿಕೆಯಾಗಬಹುದೆಂದು ಹೇಳಲಾಗಿದೆ.