ನವದೆಹಲಿ: ಶುಕ್ರವಾರ ಪ್ರತಿ ಲೀಟರ್ ಪೆಟ್ರೋಲ್ 19 ಪೈಸೆ, ಡೀಸೆಲ್ 29 ಪೈಸೆಯಷ್ಟ ಹೆಚ್ಚಳವಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಮೇ 4 ರಿಂದ 11 ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಮಾಡಿವೆ.
ಇದರಿಂದಾಗಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 2.64 ರೂ., ಡೀಸೆಲ್ ದರ 3.07 ರೂ. ಜಾಸ್ತಿಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ 93.04 ರೂ., ಡೀಸೆಲ್ 83.80 ರೂ. ಇದೆ. ರಾಜಸ್ಥಾನ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ಅನೇಕ ನಗರಗಳಲ್ಲಿ ಪೆಟ್ರೋಲ್ ದರ 100 ರೂಪಾಯಿ ಗಡಿದಾಟಿದೆ.