alex Certify ವಾಹನ ಸವಾರರೇ ಗಮನಿಸಿ…! ಇನ್ಮುಂದೆ ಮಾಸ್ಕ್ ಇದ್ದವರಿಗೆ ಮಾತ್ರ ಪೆಟ್ರೋಲ್ – ಬಂಕ್ ಮಾಲೀಕರ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರೇ ಗಮನಿಸಿ…! ಇನ್ಮುಂದೆ ಮಾಸ್ಕ್ ಇದ್ದವರಿಗೆ ಮಾತ್ರ ಪೆಟ್ರೋಲ್ – ಬಂಕ್ ಮಾಲೀಕರ ನಿರ್ಧಾರ

ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಮನೆಯಿಂದ ಹೊರ ಬರುವವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.

ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ ಕೂಡ ಈ ಅಭಿಯಾನಕ್ಕೆ ಸಾಥ್ ನೀಡಿದೆ. ಇನ್ನು ಮುಂದೆ ಮಾಸ್ಕ್ ಇಲ್ಲದವರಿಗೆ ಪೆಟ್ರೋಲ್ ಹಾಕದಿರಲು ನಿರ್ಧರಿಸಲಾಗಿದೆ. ಕರ್ನಾಟಕ ರಾಜ್ಯ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ ವತಿಯಿಂದ ನೋ ಮಾಸ್ಕ್ ನೋ ಫ್ಯೂಯಲ್ ಅಭಿಯಾನ ಕೈಗೊಳ್ಳಲಾಗಿದೆ.

ರಾಜ್ಯದ ಎಲ್ಲಾ ಪೆಟ್ರೋಲ್ ಬಂಕ್ ಗಳಲ್ಲಿ ಇನ್ನು ಮುಂದೆ ಮಾಸ್ಕ್ ಧರಿಸಿದವರಿಗೆ ಮಾತ್ರ ಪೆಟ್ರೋಲ್ ಹಾಕಲಾಗುವುದು ಎಂದು ಹೇಳಲಾಗಿದೆ. ಮನೆಯಿಂದ ಹೊರ ಬರುವವರು ಮಾಸ್ಕ್ ಕಡ್ಡಾಯವಾಗಿ ಧರಿಸುವಂತೆ ಸೂಚನೆ ನೀಡಿದ್ದು, ಇದಕ್ಕೆ ಪೆಟ್ರೋಲ್ ಬಂಕ್ ಮಾಲೀಕರು ಕೂಡ ಬೆಂಬಲಿಸಿದ್ದಾರೆ. ಪೆಟ್ರೋಲ್ ಬಂಕ್ ಗಳಲ್ಲಿ ಕೆಲಸ ಮಾಡುವ ಕಾರ್ಮಿಕರು, ಸೇಲ್ಸ್ ಮನ್ ಆರೋಗ್ಯ ಭದ್ರತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...