ನವದೆಹಲಿ: 5 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಮುಗಿದಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರಲಿದೆ. ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳಕ್ಕೆ ಕ್ಷಣಗಣನೆ ಶುರುವಾಗಿದೆ.
ಮಂಗಳವಾರ ದೆಹಲಿ ಸೇರಿದಂತೆ ಹಲವು ನಗರಗಳಲ್ಲಿ CNG ದರವನ್ನು ಕೆಜಿಗೆ 50 ಪೈಸೆ ಯಿಂದ ಒಂದು ರೂಪಾಯಿಯವರೆಗೆ ಹೆಚ್ಚಳ ಮಾಡಲಾಗಿದೆ. ಕಚ್ಚಾತೈಲದ ಬೆಲೆ ಭಾರೀ ಏರಿಕೆ ಕಂಡಿರುವ ಕಾರಣ ಪೆಟ್ರೋಲ್ ಮತ್ತು ಡೀಸೆಲ್ ದರ ಕೂಡ ಏರಿಕೆಯಾಗುವುದು ನಿಶ್ಚಿತವಾಗಿದೆ.
ಕೇಂದ್ರ ಸರ್ಕಾರ ದರ ಹೆಚ್ಚಳ ನಮ್ಮ ಕೈಯಲ್ಲಿ ಇಲ್ಲ ಎಂದು ಹೇಳಿದೆ. ಕೇಂದ್ರದ ಹಣಕಾಸು ಸಚಿವೆ ಮತ್ತು ಪೆಟ್ರೋಲಿಯಂ ಖಾತೆ ಸಚಿವರು ದರ ಏರಿಕೆ ನಿಶ್ಚಿತ ಎಂಬ ಸುಳಿವು ನೀಡಿದ್ದು, ಶೇಕಡ 80 ರಷ್ಟು ಕಚ್ಚಾತೈಲವನ್ನು ಆಮದು ಮಾಡಿಕೊಳ್ಳಲಾಗುತ್ತದೆ. ಪೆಟ್ರೋಲಿಯಂ ಕಂಪನಿಗಳು ದರ ಪರಿಷ್ಕರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದ್ದು, ಇದರೊಂದಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆಗೆ ಕ್ಷಣಗಣನೆ ಶುರುವಾಗಿದೆ.