ಹುಬ್ಬಳ್ಳಿ: ದಿನೇದಿನೇ ಪೈಸೆಗಳ ಲೆಕ್ಕದಲ್ಲಿ ಏರಿಕೆಯಾಗಿ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೇರಿದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗುವ ಸಾಧ್ಯತೆಯಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಸುಳಿವು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಾರ್ದಿಕ ಪರಿಸ್ಥಿತಿ ಉತ್ತಮವಾದರೆ ಪೆಟ್ರೋಲ್ ಮೇಲಿನ ತೆರಿಗೆ ಇಳಿಸುವ ಕುರಿತು ತೀರ್ಮಾನ ಕೈಗೊಳ್ಳುವುದು. ಉಪ ಚುನಾವಣೆಯ ನಂತರ ಇದರ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಆರ್ಥಿಕ ಸ್ಥಿತಿ ಗತಿ ಆಧರಿಸಿ ಪರಿಸ್ಥಿತಿ ಉತ್ತಮವಾಗಿದ್ದರೆ ಇಂಧನದ ಮೇಲಿನ ತೆರಿಗೆ ಇಳಿಕೆ ಮಾಡುವ ಚಿಂತನೆ ನಡೆಸಲಾಗುವುದು ಎಂದರು.