ನವದೆಹಲಿ: 10ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳವಾಗಿದೆ. ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆದಂತೆ ತೈಲ ದರ ದಿನೇ ದಿನೇ ದುಬಾರಿಯಾಗುತ್ತಿದೆ.
ಇವತ್ತು ಪೆಟ್ರೋಲ್ ಪ್ರತಿ ಲೀಟರ್ ಗೆ 34 ಪೈಸೆ ಹಾಗೂ ಡೀಸೆಲ್ ಪ್ರತಿ ಲೀಟರ್ ಗೆ 32 ಪೈಸೆಯಷ್ಟು ಹೆಚ್ಚಳ ಮಾಡಲಾಗಿದೆ. ದೈನಂದಿನ ದರ ಪರಿಷ್ಕರಣೆ ನಂತರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ 89.88 ರೂಪಾಯಿ, ಡೀಸೆಲ್ 80.27 ರೂಪಾಯಿ ಇದೆ. ತೆರಿಗೆ, ಸಾಗಣೆ ವೆಚ್ಚ ಮೊದಲಾದವುಗಳಿಂದಾಗಿ ಆಯಾ ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ದರದಲ್ಲಿ ವ್ಯತ್ಯಾಸವಿರುತ್ತದೆ.