ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಯಾಗಿರುವ ಪರಿಣಾಮ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಪ್ರತಿ ಲೀಟರ್ ಗೆ 15 ರಿಂದ 22 ರೂಪಾಯಿವರೆಗೆ ಏರಿಕೆಯಾಗುವ ಸಾಧ್ಯತೆ ಇದೆ. ಮಾರ್ಚ್ 7 ರಂದು 5 ರಾಜ್ಯಗಳ ವಿಧಾನಸಭೆ ಚುನಾವಣೆಯ ಕೊನೆ ಹಂತದ ಮತದಾನ ನಡೆಯಲಿದ್ದು, ನಂತರ ಪೆಟ್ರೋಲ್ ದರ ಹಂತ ಹಂತವಾಗಿ ಏರಿಕೆಯಾಗಲಿದೆ.
ರಷ್ಯಾ, ಉಕ್ರೇನ್ ಯುದ್ಧದ ಪರಿಣಾಮದಿಂದ ಜಾಗತಿಕ ಮಾರುಕಟ್ಟೆಯಲ್ಲಿ ಅನೇಕ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದರ ಪರಿಣಾಮ ದೇಶೀಯ ಮಾರುಕಟ್ಟೆಯ ಮೇಲೆಯೂ ಉಂಟಾಗಿದೆ. ಕಚ್ಚಾತೈಲದ 2014ರ ನಂತರ ಇದೇ ಮೊದಲ ಬಾರಿಗೆ ಬ್ಯಾರೆಲ್ ಗೆ 113 ಡಾಲರ್ ಗೆ ತಲುಪಿದ್ದು, ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ದರ ಲೀಟರ್ ಗೆ 15 ರಿಂದ 22 ರೂ.ನಷ್ಟು ಹೆಚ್ಚಳವಾಗಬಹುದು.