ನವದೆಹಲಿ: ಕಚ್ಚಾತೈಲ ಬೆಲೆ ಬ್ಯಾರೆಲ್ ಗೆ 113 ಡಾಲರ್ ಗಿಂತಲೂ ಹೆಚ್ಚಾಗಿದೆ. ಕಳೆದ 8 ರಿಂದ 10 ವರ್ಷಗಳಲ್ಲಿ ಗರಿಷ್ಠ ಏರಿಕೆ ಕಂಡಿದ್ದು, ಇದರಿಂದಾಗಿ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಲಿದೆ.
ಮಾರ್ಚ್ 7 ರಂದು ಉತ್ತರಪ್ರದೇಶದಲ್ಲಿ ಕೊನೆಯ ಹಂತದ ಚುನಾವಣೆ ನಡೆಯಲಿದ್ದು, ಮತದಾನ ಮುಕ್ತಾಯವಾಗುತ್ತಿದ್ದಂತೆ ತೈಲ ಕಂಪನಿಗಳಿಗೆ ದರ ಏರಿಕೆಗೆ ಸರ್ಕಾರ ಒಪ್ಪಿಗೆ ನೀಡಲಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರ 15 -22 ರೂ.ವರೆಗೂ ಏರಿಕೆಯಾಗಲಿದೆ.
ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗುವ ಮೊದಲೇ ಬೆಲೆ ಏರಿಕೆಯಾಗಲಿದೆ. ಭಾರತವು ರಷ್ಯಾದಿಂದ ಶೇಕಡ 15 ರಷ್ಟು ಕಚ್ಚಾತೈಲ ಆಮದು ಮಾಡಿಕೊಳ್ಳುತ್ತದೆ. ಒಟ್ಟಾರೆ ಶೇಕಡ 85 ರಷ್ಟು ಆಮದು ಮಾಡಿಕೊಳ್ಳಲಾಗುತ್ತಿದೆ. ಉಕ್ರೇನ್ ಮೇಲೆ ರಷ್ಯಾ ಯುದ್ಧ ಕೈಗೊಂಡಿದೆ. ಇದರ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ವಸ್ತುಗಳ ಬೆಲೆ ಏರಿಕೆಯಾಗಿದೆ.
ಕಚ್ಚಾತೈಲದ 2014ರ ನಂತರ ಇದೇ ಮೊದಲ ಬಾರಿಗೆ ಬ್ಯಾರೆಲ್ ಗೆ 113 ಡಾಲರ್ ಗೆ ತಲುಪಿದ್ದು, ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ದರ ಲೀಟರ್ ಗೆ 15 ರಿಂದ 22 ರೂ.ನಷ್ಟು ಹೆಚ್ಚಳವಾಗಬಹುದು.