ನವದೆಹಲಿ: ರಷ್ಯಾ –ಉಕ್ರೇನ್ ಸಂಘರ್ಷದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ.
ಕಚ್ಚಾತೈಲದ ದರ ಏರಿಕೆಯಾಗಿ ರಷ್ಯಾ –ಉಕ್ರೇನ್ ಸಂಘರ್ಷ ನಡೆಯುತ್ತಿರುವುದರಿಂದ ಬೆಲೆ ಏರಿಕೆ ಬಿಸಿ ತಟ್ಟದಂತೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ನಿಗಾವಹಿಸಲಾಗಿದೆ.
ತೈಲದ ಮೇಲಿನ ಅಬಕಾರಿ ಸುಂಕ ಇಳಿಕೆ ಹಾಗೂ ಸಂಗ್ರಹಾಗಾರದಲ್ಲಿರುವ ಕಚ್ಚಾತೈಲವನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಆದರೆ, ಈಗಿನ ಪರಿಸ್ಥಿತಿಯನ್ನು ಗಮನಿಸಿದಾಗ ಪೆಟ್ರೋಲ್ ದರ ಲೀಟರ್ ಗೆ 5 ರಿಂದ 10 ರೂಪಾಯಿವರೆಗೂ ಏರಿಕೆಯಾಗಬಹುದು ಎಂದು ಹೇಳಲಾಗಿದೆ.
ಮಾರ್ಚ್ 10 ರಂದು ಐದು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆ ಕಾರಣಕ್ಕೆ ಬೆಲೆ ಏರಿಕೆಗೆ ಬ್ರೇಕ್ ಹಾಕಲಾಗಿದ್ದು, ಮತದಾನ ಮುಕ್ತಾಯವಾಗುತ್ತಿದ್ದಂತೆ ಪೆಟ್ರೋಲ್, ಡೀಸೆಲ್ ದರ 10 ರು.ವರೆಗೂ ಏರಿಕೆಯಾಗಬಹುದು ಎಂದು ಹೇಳಲಾಗಿದೆ.