
ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರ ಸಾರ್ವಕಾಲಿಕ ದಾಖಲೆ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಗೆ ಸರ್ಕಾರ ಚಿಂತನೆ ನಡೆಸಿದೆ.
ಪೆಟ್ರೋಲ್ ಮತ್ತು ಡೀಸೆಲ್ ಸುಂಕ ಇಳಿಕೆಯ ಬಗ್ಗೆ ಮೊದಲ ಬಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದ್ದಾರೆ. ರಾಜ್ಯದ ಹಣಕಾಸು ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕ ಕಡಿಮೆ ಮಾಡುವ ನಿರ್ಧಾರವನ್ನು ಏಕಾಏಕಿ ಕೈಗೊಳ್ಳಲು ಸಾಧ್ಯವಿಲ್ಲ. ರಾಜ್ಯದ ಹಣಕಾಸು ಪರಿಸ್ಥಿತಿ ನೋಡಿಕೊಂಡು ಸುಂಕ ಕಡಿತ ಮಾಡುವ ಕುರಿತು ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.