ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಗುರುವಾರ ಪೆಟ್ರೋಲ್ ಚಿಲ್ಲರೆ ಮಾರಾಟದ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದೆ.
ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪ್ರತಿ ಲೀಟರ್ ಗೆ 35 ಪೈಸೆ ಹೆಚ್ಚಳ ಮಾಡಲಾಗಿದ್ದು, ದೆಹಲಿಯಲ್ಲಿ ಪೆಟ್ರೋಲ್ 86.65 ರೂ., ಡೀಸೆಲ್ 76.83 ರೂಪಾಯಿಗೆ ಮಾರಾಟವಾಗುತ್ತಿದೆ. 29 ದಿನಗಳವರೆಗೆ ದರಗಳನ್ನು ಸ್ಥಿರವಾಗಿ ಇರಿಸಿಕೊಂಡಿದ್ದ ತೈಲಕಂಪನಿಗಳು ಜನವರಿ ಆರಂಭದಿಂದಲೇ ಇಂಧನ ದರ ಹೆಚ್ಚಳ ಮಾಡಲು ಆರಂಭಿಸಿದವು.
ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರುಗತಿಯಲ್ಲಿ ಸಾಗುತ್ತಿದ್ದು, ಮುಂಬೈನಲ್ಲಿಯೂ ಪೆಟ್ರೋಲ್ ಮತ್ತು ಡೀಸೆಲ್ ದರ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದೆ. ಪೆಟ್ರೋಲ್ ಲೀಟರಿಗೆ 93.20 ರೂ. 83.67 ರೂ.ವರೆಗೆ ಏರಿಕೆಯಾಗಿದೆ.