ಕೊರೊನಾ ಸಂಕಷ್ಟದ ನಡುವೆ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಮತ್ತೆ ಏರಿಕೆಯಾಗಿದೆ. ಕಳೆದ 29 ದಿನಗಳಿಂದ ಯಾವುದೇ ಏರಿಕೆ ಕಾಣದೆ ಸ್ಥಿರತೆ ಕಾಯ್ದುಕೊಂಡಿದ್ದ ಪೆಟ್ರೋಲ್ ಹಾಗೂ ಡಿಸೇಲ್ ದರ ಇಂದು ಮತ್ತೆ ಏರಿಕೆಯಾಗುವ ಮೂಲಕ ಗರಿಷ್ಟ ಮೌಲ್ಯ ತಲುಪಿದೆ.
ಇಂದು ಪೆಟ್ರೋಲ್ ಬೆಲೆಯಲ್ಲಿ 26 ಪೈಸೆ ಹಾಗೂ ಡಿಸೇಲ್ ಬೆಲೆಯಲ್ಲಿ 25 ಪೈಸೆ ಏರಿಕೆಯಾಗಿದೆ. ಇದರಿಂದಾಗಿ ರಾಷ್ಟ್ರ ರಾಜಧಾನಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ ಈಗ 83.97 ರೂ. ಗಳಾಗಿದ್ದು, ಡಿಸೇಲ್ ದರ ಪ್ರತಿ ಲೀಟರ್ ಗೆ 74.12 ರೂಪಾಯಿ ತಲುಪಿದೆ.
ಪೆಟ್ರೋಲ್ ಬೆಲೆ ದಾಖಲೆಯ ಮಟ್ಟ ತಲುಪಿದ್ದು, 2018 ರಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 84 ರೂಪಾಯಿ ತಲುಪಿದ್ದು, ಈಗ ಅದರ ಸನಿಹಕ್ಕೆ ಬಂದು ನಿಂತಿದೆ.
ಲಾಕ್ಡೌನ್ ಸಂದರ್ಭದಲ್ಲಿ ಬಹುತೇಕ ಸ್ಥಗಿತಗೊಂಡಿದ್ದ ವಹಿವಾಟುಗಳು ಈಗ ಪುನರಾರಂಭವಾಗಿದ್ದು, ಜನಜೀವನ ಕ್ರಮೇಣ ಸಹಜ ಸ್ಥಿತಿಗೆ ಬರುತ್ತಿದೆ. ಇದರ ಮಧ್ಯೆ ಏರಿಕೆಯಾಗಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಿಂದ ಜನಸಾಮಾನ್ಯರು ತತ್ತರಿಸುವಂತಾಗಿದೆ.