alex Certify ʼಆಧಾರ್ʼ ಹೊಂದಿದವರಿಗೆ UIDAI ನಿಂದ ಮಹತ್ವದ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಆಧಾರ್ʼ ಹೊಂದಿದವರಿಗೆ UIDAI ನಿಂದ ಮಹತ್ವದ ಸೂಚನೆ

ಆಧಾರ್ ಕಾರ್ಡ್ ಗೆ ಸಂಬಂಧಿಸಿದಂತೆ ಯುಐಡಿಎಐ ಎಚ್ಚರಿಕೆ ನೀಡಿದೆ. ಆಧಾರ್ ಕಾರ್ಡ್‌ ಮಾಹಿತಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಬಾರದು ಎಂದು ಯುಐಡಿಎಐ ಹೇಳಿದೆ.

ಆಧಾರ್ ಕಾರ್ಡ್ ನ ಮಾಹಿತಿಯನ್ನು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದನ್ನು ನೋಡಿದ ಯುಐಡಿಎಐ ಆಧಾರ್ ಕಾರ್ಡ್ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಬೇಡಿ.

ವೈಯಕ್ತಿಕ ಸಂದೇಶದಲ್ಲಿ ಮಾಹಿತಿ ಹಂಚಿಕೊಳ್ಳಿ. ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಳ್ಳುವುದ್ರಿಂದ ನಷ್ಟವಾಗುವ ಸಾಧ್ಯತೆಯಿದೆ ಎಂದು ಯುಐಡಿಎಐ ಹೇಳಿದೆ.

ಯುಐಡಿಎಐ ಟ್ವೀಟರ್ ನಲ್ಲಿ ಈ ಮಾಹಿತಿ ಹಂಚಿಕೊಂಡಿದೆ. ಹಾಗೆ ಆಧಾರ್ ಗಾಗಿ ಸರತಿ ಸಾಲಿನಲ್ಲಿ ನಿಲ್ಲುವ ಬದಲು ಮನೆಯಲ್ಲೇ ಕುಳಿತು ನಿಮ್ಮ ಅಪಾಯಿಂಟ್ಮೆಂಟ್ ಬುಕ್ ಮಾಡಬಹುದು. ಇದಕ್ಕಾಗಿ http//sappointments.uidai.gov.inbookappointment.aspx ಕ್ಲಿಕ್ ಮಾಡಬೇಕು. ಇದಕ್ಕಾಗಿ ಕ್ಯೂಆರ್ ಕೋಡ್ ಬಿಡುಗಡೆ ಮಾಡಲಾಗಿದೆ.

ಹಾಗೆ ಕೊರೊನಾ ಸಂದರ್ಭದಲ್ಲಿ ಜನರ ಕೆಲಸ ಸುಲಭ ಮಾಡಲು ಯುಐಡಿಎಐ ಜನರಿಗೆ ಸೌಲಭ್ಯ ನೀಡ್ತಿದೆ. mAadhaar ಅಪ್ಲಿಕೇಷನ್ ಮೂಲಕ ನಿಮ್ಮ ವಿಳಾಸ ಸೇರಿದಂತೆ ಹೆಸರು, ಹುಟ್ಟಿದ ದಿನಾಂಕವನ್ನು ಬದಲಿಸಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...