ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 11 ನೇ ಕಂತಿನ ಹಣವನ್ನು ಮೇ 31 ರಂದು ರೈತರ ಖಾತೆಗೆ ಜಮಾ ಮಾಡಲಾಗುತ್ತದೆ.
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 8 ವರ್ಷ ಅಧಿಕಾರ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಶಿಮ್ಲಾದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಸುಮಾರು 21 ಸಾವಿರ ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಿದ್ದಾರೆ. ರೈತರ ಖಾತೆಗಳಿಗೆ ತಲಾ 2 ಸಾವಿರ ರೂಪಾಯಿ ಜಮಾ ಮಾಡಲಾಗುವುದು.