ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ದೆಹಲಿಯಲ್ಲಿ ಪಿಎಂ ಕಿಸಾನ್ ಸಮ್ಮೇಳನ ಉದ್ಘಾಟಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಅವರು ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತಿನ ಹಣವನ್ನು ರೈತರ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ 16,000 ಕೋಟಿ ರೂ. ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗುವುದು.
ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಎರಡು ದಿನಗಳ ಕಾಲ ಸಮ್ಮೇಳನ ನಡೆಯಲಿದ್ದು, ದೇಶದ 13,500 ರೈತ ಪ್ರತಿನಿಧಿಗಳು, 1,500 ಕೃಷಿ ಸ್ಟಾರ್ಟಪ್ ಉದ್ಯಮಿಗಳು, ಕೃಷಿ ಸಂಶೋಧಕರು, ವಿಜ್ಞಾನಿಗಳು, ವಿವಿಧ ವಲಯದ ಗಣ್ಯರು ಹಾಗೂ ವಿಡಿಯೋ ಕಾನ್ಫರೆನ್ಸ್ ಮೂಲಕ ಒಂದು ಕೋಟಿ ರೈತರು ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ.