ನವದೆಹಲಿ: ಕೃಷಿ ಮೂಲಸೌಕರ್ಯ ನಿಧಿಯಡಿ ವಿವಿಧ ಸೌಲಭ್ಯ ಒದಗಿಸುವ 1 ಲಕ್ಷ ಕೋಟಿ ರೂಪಾಯಿ ಯೋಜನೆಗೆ ಪ್ರಧಾನಿ ಇಂದು ಚಾಲನೆ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಯೋಜನೆಗೆ ಚಾಲನೆ ನೀಡಲಿದ್ದಾರೆ.
ಇದೇ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ರೈತರ ಕಂತು ಬಿಡುಗಡೆ ಮಾಡಲಾಗುವುದು. 8.5 ಕೋಟಿ ರೈತರ ಖಾತೆಗೆ 6 ನೇ ಕಂತಿನ ಹಣ ಪಾವತಿ ಮಾಡಲು 17 ಸಾವಿರ ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ.