ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 8 ನೇ ಕಂತಿನ ಹಣವನ್ನು ಇಂದು ಬಿಡುಗಡೆ ಮಾಡಲಾಗುವುದು. 19 ಸಾವಿರ ಕೋಟಿ ರೂಪಾಯಿಯನ್ನು 9.5 ಕೋಟಿ ರೈತರ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗುತ್ತದೆ.
ಪ್ರಧಾನಿ ಮೋದಿ ಅವರು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನೇರ ವರ್ಗಾವಣೆಗೆ ಚಾಲನೆ ನೀಡಲಿದ್ದು, ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎನ್ನಲಾಗಿದೆ.
ಇನ್ನು ಪ್ರಧಾನ ಮಂತ್ರಿಯವರ ಕಚೇರಿ ಪ್ರಕಾರ, 9.5 ಕೋಟಿಗಿಂತ ಹೆಚ್ಚು ಫಲಾನುಭವಿ ರೈತ ಕುಟುಂಬಗಳಿಗೆ 19,000 ಕೋಟಿ ರೂಪಾಯಿಗೂ ಹೆಚ್ಚು ಹಣ ವರ್ಗಾವಣೆ ಆಗಲಿದೆ. ಅರ್ಹ ಫಲಾನುಭವಿ ರೈತ ಕುಟುಂಬಗಳಿಗೆ ವರ್ಷಕ್ಕೆ 6000 ರೂ. ನೀಡಲಾಗುತ್ತದೆ. ಪ್ರತಿ 4 ತಿಂಗಳಿಗೊಮ್ಮೆ ತಲಾ 2,000 ರೂ. 3 ಕಂತುಗಳಲ್ಲಿ ಪಾವತಿಸಲಾಗುವುದು.