ನವದೆಹಲಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ರೈತರಿಗೆ 11 ನೇ ಕಂತು ಬಿಡುಗಡೆ ಮಾಡಲಾಗುವುದು.
ಇದುವರೆಗೆ ಈ ಯೋಜನೆಯ 10 ಕಂತುಗಳು ರೈತರ ಖಾತೆಗೆ ಬಂದಿವೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ರೈತರು 11 ನೇ ಕಂತಿಗೆ ಇ-ಕೆವೈಸಿಯನ್ನು ಪೂರ್ಣಗೊಳಿಸಬೇಕಾಗುತ್ತದೆ. ಯೋಜನೆಯ ಪ್ರಯೋಜನಗಳನ್ನು ಪಡೆಯಲು e –KYC ಕಡ್ಡಾಯವಾಗಿದ್ದು, ಇದಕ್ಕಾಗಿ ಕೇಂದ್ರ ಸರ್ಕಾರ ಗಡುವು ವಿಸ್ತರಿಸಿದೆ. ಈ ಮಾಹಿತಿಯನ್ನು ಪಿಎಂ ಕಿಸಾನ್ ಪೋರ್ಟಲ್(pmkisan.gov.in) ನಲ್ಲಿ ನೀಡಲಾಗಿದೆ. ಮಾಹಿತಿಯ ಪ್ರಕಾರ, ಈಗ e -KYC ಅನ್ನು ಮೇ 22, 2022 ರವರೆಗೆ ಪೂರ್ಣಗೊಳಿಸಬಹುದು. ಮೊದಲು ಮಾರ್ಚ್ 31 ರೊಳಗೆ ಇ –ಕೆವೈಸಿ ಪೂರ್ಣಗೊಳಿಸಬೇಕೆಂದು ಹೇಳಲಾಗಿತ್ತು.
ಶೀಘ್ರದಲ್ಲೇ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 11 ನೇ ಕಂತು ಕೂಡ ಬಿಡುಗಡೆಯಾಗಲಿದೆ. ಆಧಾರ್ ಆಧಾರಿತ OTP ದೃಢೀಕರಣಕ್ಕಾಗಿ, ರೈತರು ಕಿಸಾನ್ ಕಾರ್ನರ್‌ನಲ್ಲಿ ಇ-ಕೆವೈಸಿ ಪೂರ್ಣಗೊಳಿಸಬೇಕಿದೆ. ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಹತ್ತಿರದ ಸಿಎಸ್‌ಸಿ ಕೇಂದ್ರಕ್ಕೆ ಭೇಟಿ ನೀಡಬೇಕು. ಮೊಬೈಲ್, ಕಂಪ್ಯೂಟರ್ ಅಥವಾ ಲ್ಯಾಪ್ ಟಾಪ್‌ನಿಂದಲೂ ನೀವು ಮನೆಯಲ್ಲಿ ಕುಳಿತು ಈ ಕೆಲಸವನ್ನು ಮಾಡಬಹುದು.