
ನವದೆಹಲಿ: ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ಯೋಜನೆಯಡಿ ರೈತರ ಖಾತೆಗೆ ಇವತ್ತು 2000 ರೂಪಾಯಿ ಜಮಾ ಮಾಡಲಾಗುತ್ತದೆ.
ದೇಶದ 9.75 ಕೋಟಿ ರೈತರಿಗೆ ತಲಾ 2 ಸಾವಿರ ರೂಪಾಯಿ ಸಹಾಯಧನದ ಕಂತನ್ನು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡುವರು. ರೈತರಿಗೆ ವಾರ್ಷಿಕ 6 ಸಾವಿರ ರೂಪಾಯಿ ಸಹಾಯಧನ ನೀಡಲಿದ್ದು, 9 ನೇ ಕಂತಿನ ಹಣವನ್ನು ಇಂದು ಬಿಡುಗಡೆ ಮಾಡಲಾಗುತ್ತದೆ.