ರೈತರು ಈ ವಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ 13 ನೇ ಕಂತು ಪಡೆಯುವ ಸಾಧ್ಯತೆಯಿದೆ. ಫೆಬ್ರವರಿ 24 ರಂದು ಫಲಾನುಭವಿ ರೈತರಿಗೆ 13 ನೇ ಕಂತಿನ 2,000 ರೂ.ಗಳನ್ನು ಜಮಾ ಮಾಡುವ ಸಾಧ್ಯತೆಯಿದೆ.
PM-KISAN ಯೋಜನೆಯ ಭಾಗವಾಗಿ ಪ್ರತಿ ಅರ್ಹ ರೈತ ಕುಟುಂಬವು ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳನ್ನು ಪಡೆಯುತ್ತದೆ. ವಾರ್ಷಿಕವಾಗಿ 6,000 ರೂ. ನೀಡಲಾಗುವುದು. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಮೂರು ಕಂತುಗಳಲ್ಲಿ ಪ್ರತಿ ವರ್ಷ ಅವರ ಖಾತೆಗೆ ಮೊತ್ತವನ್ನು ನೇರವಾಗಿ ಜಮಾ ಮಾಡಲಾಗುತ್ತದೆ.
ಆರ್ಥಿಕ ನೆರವು ಅಗತ್ಯವಿರುವ ರೈತ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲು 2018 ರ ಡಿಸೆಂಬರ್‌ನಲ್ಲಿ ಪಿಎಂ ಕಿಸಾನ್ ಯೋಜನೆಯನ್ನು ಪ್ರಾರಂಭಿಸಲಾಗಿದೆ.
ಪ್ರಧಾನ ಮಂತ್ರಿ ಕಿಸಾನ್ ಯೋಜನೆಯು ಕೇಂದ್ರ ವಲಯದ ಯೋಜನೆಯಾಗಿದ್ದು, ಭಾರತೀಯ ಪ್ರಜೆಗಳಾಗಿರುವ ಸಣ್ಣ ಮತ್ತು ಅತಿ ಸಣ್ಣ ರೈತರು ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಅರ್ಹರಾಗಿದ್ದಾರೆ. ತಮ್ಮ ಹೆಸರಿನಲ್ಲಿ ಸಾಗುವಳಿ ಭೂಮಿ ಹೊಂದಿರುವ ರೈತರು ಸಹ ಯೋಜನೆಯಡಿ ಲಾಭ ಪಡೆಯಲು ಅರ್ಹರಾಗಿರುತ್ತಾರೆ.
pmkisan.gov.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಫಲಾನುಭವಿ ಸ್ಥಿತಿ ಪರಿಶೀಲನೆ ಮಾಡಬಹುದು.