alex Certify BIG NEWS: ಮೋದಿ ಸರ್ಕಾರದಿಂದ ಮತ್ತೊಂದು ವಿಶೇಷ ‘ಪ್ಯಾಕೇಜ್’ ಘೋಷಣೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೋದಿ ಸರ್ಕಾರದಿಂದ ಮತ್ತೊಂದು ವಿಶೇಷ ‘ಪ್ಯಾಕೇಜ್’ ಘೋಷಣೆ ಸಾಧ್ಯತೆ

ನವದೆಹಲಿ: ಲಾಖ್ ಡೌನ್ ಜಾರಿಯಾಗಿದ್ದರಿಂದ ಆರ್ಥಿಕತೆಗೆ ದೊಡ್ಡ ಪೆಟ್ಟು ಬಿದ್ದಿದ್ದು ಆರ್ಥಿಕತೆ ಉತ್ತೇಜನಕ್ಕಾಗಿ ಎರಡನೇ ಹಂತದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಗೃಹಸಚಿವ ಅಮಿತ್ ಶಾ ಮತ್ತು ಕೇಂದ್ರದ ಹಿರಿಯ ಸಚಿವರು ಸೇರಿದಂತೆ ಹಣಕಾಸು ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಇಂದು ಸರಣಿ ಸಭೆ ನಡೆಸಿದ್ದಾರೆ.

ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಿದ ಸಂದರ್ಭದಲ್ಲಿ ಮೋದಿ ವಿವಿಧ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. ಇದನ್ನು ಆಧರಿಸಿ ಕಾರ್ಮಿಕ, ಇಂಧನ, ವಿಮಾನಯಾನ ಮೊದಲಾದ ಇಲಾಖೆಗಳ ಸಚಿವರೊಂದಿಗೆ ಸಭೆ ನಡೆಸಿದ್ದಾರೆ. ಸಭೆಯ ಅಭಿಪ್ರಾಯ ಪಡೆದಿದ್ದ ಮೋದಿ ಇಂದು ಕೇಂದ್ರದ ಹಿರಿಯ ಸಚಿವರೊಂದಿಗೆ ಚರ್ಚೆ ನಡೆಸಿದ್ದಾರೆ. ಸಣ್ಣ ಮತ್ತು ಮಧ್ಯಮ ವಲಯದ ಉದ್ಯಮಗಳು ಸೇರಿದಂತೆ ವಿವಿಧ ವಲಯಗಳಿಗೆ ಆರ್ಥಿಕ ಉತ್ತೇಜನಕ್ಕಾಗಿ ಎರಡನೇ ಹಂತದ ಪ್ಯಾಕೇಜ್ ನೀಡಲು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...