ಕೊರೊನಾ ಸಂಕಷ್ಟದ ನಡುವೆಯೂ ಆಗ್ರಾದ ಜನರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯನ್ನ ನೀಡಿದೆ. ಇನ್ನೇನು ಕೆಲವೇ ದಿನಗಳಲ್ಲಿ ಆಗ್ರಾ ಮೆಟ್ರೋ ಯೋಜನೆ ಕಾಮಗಾರಿಗೆ ಚಾಲನೆ ಸಿಗಲಿದೆ,
ಆಗ್ರಾ ಮೆಟ್ರೋ ಯೋಜನೆ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್ 7ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ.
ಆಗ್ರಾದ 15 ಬೆಟಾಲಿಯನ್ ಪಿಎಸಿ ಪರೇಡ್ ಮೈದಾನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಗಣ್ಯಾತಿಗಣ್ಯರು ಭಾಗಿಯಾಗಲಿದ್ದಾರೆ.