ಬೆಂಗಳೂರು: ಬೆಳ್ಳುಳ್ಳಿ ದರ ಕೆಜಿಗೆ 400 ರೂ.ಗೆ ತಲುಪಿದ್ದು, ಬೆಲೆ ಏರಿಕೆಯಿಂದ ಗ್ರಾಹಕರು ಕಂಗಾಲಾಗಿದ್ದಾರೆ. ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ದರ ಕೆಜಿಗೆ 320 ನಿಂದ 400 ರೂ.ವರೆಗೆ ತಲುಪಿದೆ.
ಕಳೆದ ಒಂದು ತಿಂಗಳಲ್ಲಿ ಬೆಳ್ಳುಳ್ಳಿ ದರ ಎರಡು ಪಟ್ಟು ಹೆಚ್ಚಾಗಿದೆ. ಕಳೆದ ತಿಂಗಳು ಕೆಜಿಗೆ 100- 150ರೂ.ವರೆಗೆ ಇದ್ದ ದರ ನಂತರ 250 ರೂ.ಗೆ ತಲುಪಿತ್ತು. ಇದೀಗ 400 ರೂಪಾಯಿವರೆಗೆ ಮಾರಾಟವಾಗುತ್ತಿದೆ. ಹೊಸ ಬೆಳೆ ಬರುವವರೆಗೆ ದರ ಏರುಗತಿಯಲ್ಲಿ ಸಾಗುವ ಸಾಧ್ಯತೆ ಇದೆ.
ಬೆಂಗಳೂರು, ಬೀದರ್, ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವು ಕಡೆ ಬೆಳ್ಳುಳ್ಳಿ ದರ ಕೆಜಿಗೆ 400 ರೂ.ವರೆಗೆ ತಲುಪಿದೆ. ಉತ್ತಮ ದರ್ಜೆಯ ಬೆಳ್ಳುಳ್ಳಿ ದರ ಕೆಜಿಗೆ 400 ರೂ., ಸಾಧಾರಣ ಗುಣಮಟ್ಟದ ಬೆಳ್ಳುಳ್ಳಿ ಕೆಜಿಗೆ 240 -320 ರೂ.ವರೆಗೆ ಇದೆ.