alex Certify ಮೊದಲ ದಿನವೇ ಮದ್ಯ ಮಾರಾಟಕ್ಕೆ ಭರ್ಜರಿ ರೆಸ್ಪಾನ್ಸ್ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ಕುಡುಕರಿಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೊದಲ ದಿನವೇ ಮದ್ಯ ಮಾರಾಟಕ್ಕೆ ಭರ್ಜರಿ ರೆಸ್ಪಾನ್ಸ್ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ಕುಡುಕರಿಗೆ ಬಿಗ್ ಶಾಕ್

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಮದ್ಯ ಮಾರಾಟ ಆರಂಭವಾಗಿದ್ದು, ಮದ್ಯ ಪ್ರಿಯರಂತೂ ಸಂಭ್ರಮದಿಂದ ಮದ್ಯ ಖರೀದಿಸಿದ್ದಾರೆ. 42 ದಿನಗಳಿಂದ ಬಂದ್ ಆಗಿದ್ದ ಮದ್ಯದ ಅಂಗಡಿಗಳ ಎದುರು ಜನಜಾತ್ರೆಯೇ ಕಂಡು ಬಂದಿದ್ದು, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ ಕಂಡು ಬಂದಿದೆ. ಇಂದು ಅಬಕಾರಿ ಇಲಾಖೆಗೆ ಬರೋಬ್ಬರಿ 45 ಕೋಟಿ ರೂಪಾಯಿ ಆದಾಯ ಬಂದಿದೆ.

ಇದೇ ವೇಳೆ ಕರ್ನಾಟಕ ಸರ್ಕಾರದಿಂದ ಮದ್ಯ ಪ್ರಿಯರಿಗೆ ಬಿಗ್ ಶಾಕ್ ನೀಡಲಾಗಿದೆ. ನಾಳೆಯಿಂದ ಸರಬರಾಜಾಗುವ ಮದ್ಯಕ್ಕೆ ನೂತನ ದರ ವಿಧಿಸಲಾಗುವುದು. ನಾಳೆಯಿಂದ ಮದ್ಯಕ್ಕೆ ಶೇಕಡ 6 ರಷ್ಟು ದರ ಏರಿಕೆ ಮಾಡಲಾಗಿದೆ. ಏಪ್ರಿಲ್ 1 ರಿಂದ ಪೂರ್ವಾನ್ವಯವಾಗುವಂತೆ ದರ ಹೆಚ್ಚಳಕ್ಕೆ ಆದೇಶಿಸಲಾಗಿತ್ತು. ಲಾಕ್ ಡೌನ್ ನಿಂದಾಗಿ ಆದೇಶ ಅನುಷ್ಠಾನವಾಗದ ದರ ಹೆಚ್ಚಳವಾಗಿರಲಿಲ್ಲ. ಇಂದು ಹಳೆ ದರದಲ್ಲೇ ಮದ್ಯ ಮಾರಾಟ ಮಾಡಲಾಗಿದ್ದು, ನಾಳೆಯಿಂದ ಸರಬರಾಜು ಮಾಡುವ ಮದ್ಯಕ್ಕೆ ಹೊಸ ದರ ಇರಲಿದೆ ಎಂದು ಹೇಳಲಾಗಿದೆ.

ಕಳೆದ ಮಾರ್ಚ್ ನಲ್ಲಿ ಸಿಎಂ ಯಡಿಯೂರಪ್ಪ ಮಂಡಿಸಿದ ಬಜೆಟ್ ನಲ್ಲಿ ವಿವಿಧ ಮದ್ಯಗಳ ಮೇಲಿನ ತೆರಿಗೆಯನ್ನು ಶೇಕಡ 6 ರಷ್ಟು ಹೆಚ್ಚಳ ಮಾಡಿದ್ದಾರೆ. ಮದ್ಯದ ಎಲ್ಲಾ 18 ಘೋಷಿತ ಬೆಲೆ ಸ್ಲ್ಯಾಬ್ ಗಳ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಶೇಕಡ 6ರಷ್ಟು ಹೆಚ್ಚಳ ಮಾಡಲಾಗಿದೆ. ಇದರಿಂದಾಗಿ ವಿವಿಧ ಬ್ರಾಂಡ್ ಮದ್ಯದ ಬೆಲೆ 180 ಎಂಎಲ್ ದರ ಕನಿಷ್ಠ 3 ರೂಪಾಯಿಯಿಂದ 30 ರೂಪಾಯಿಯವರೆಗೆ ಹೆಚ್ಚಳವಾಗಲಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...