ನವದೆಹಲಿ: ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ದರವನ್ನು ಏರಿಕೆ ಮಾಡಲಾಗಿದೆ. ಪ್ರತಿ ಸಿಲಿಂಡರ್ ದರವನ್ನು 102 ರೂಪಾಯಿ ಏರಿಕೆ ಮಾಡಲಾಗಿದೆ.
19 ಕೆಜಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ದರ 2430.50 ರೂಪಾಯಿಗೆ ಏರಿಕೆಯಾಗಿದೆ. ಗೃಹಪಯೋಗಿ ಸಿಲಿಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.
ಎಲ್ಪಿಜಿ ಸಿಲಿಂಡರ್, ಅಡುಗೆ ಎಣ್ಣೆ, ದಿನಸಿ ವಸ್ತುಗಳು ಸೇರಿದಂತೆ ಅನೇಕ ಅಗತ್ಯ ವಸ್ತುಗಳ ದರ ಏರಿಕೆಯಾಗಿದ್ದು, ಹೋಟೆಲ್ಗಳಲ್ಲಿ ತಿಂಡಿ-ಊಟದ ದರವನ್ನು ಹೆಚ್ಚಳ ಮಾಡಲಾಗಿದೆ. ಈಗ ಮತ್ತೆ ವಾಣಿಜ್ಯ ಸಿಲಿಂಡರ್ ದರವನ್ನು ಏರಿಕೆ ಮಾಡಲಾಗಿದ್ದು, ಪ್ರತಿ ಸಿಲಿಂಡರ್ ದರ 2430 ರೂಪಾಯಿಗೂ ಅಧಿಕವಾಗಿರುವುದರಿಂದ ಹೋಟೆಲ್ ಮಾಲೀಕರಿಗೆ ನುಂಗಲಾರದ ತುತ್ತಾಗಿದ್ದು, ಗ್ರಾಹಕರಿಗೆ ಹೊರೆ ವರ್ಗಾಯಿಸುವುದು ಅನಿವಾರ್ಯವಾಗಿದೆ ಎನ್ನಲಾಗಿದೆ.