ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಹೊತ್ತಲ್ಲೇ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರ ಏರಿಕೆಯಾಗಿದೆ.
14.2 ಕೆಜಿ ತೂಕದ ಅಡುಗೆ ಅನಿಲ ಸಿಲಿಂಡರ್ ದರ 15 ರೂಪಾಯಿ ಹೆಚ್ಚಳ ಮಾಡಲಾಗಿದೆ. ಇದರೊಂದಿಗೆ ಕಳೆದ 3 ತಿಂಗಳಲ್ಲಿ ಎಲ್ಪಿಜಿ ದರ 90 ರೂ. ಏರಿಕೆಯಾಗಿದೆ. ಜುಲೈನಲ್ಲಿ 25 ರೂ., ಆಗಸ್ಟ್ ನಲ್ಲಿ 25 ರೂ. ಮತ್ತು ಸೆಪ್ಟೆಂಬರ್ ನಲ್ಲಿ 25 ರೂ. ಹೆಚ್ಚಳವಾಗಿದ್ದು, ಈಗ 15 ರೂ. ಹೆಚ್ಚಳ ಮಾಡಲಾಗಿದೆ.
ಪೆಟ್ರೋಲ್ ಬೆಲೆ ಗಗನಕ್ಕೇರಿದ್ದು ಸಾರ್ವಕಾಲಿಕ ದಾಖಲೆ ಬರೆದಿದೆ. ಪೆಟ್ರೋಲ್ ಗೆ ಪೈಪೋಟಿ ನೀಡುವಂತೆ ಡೀಸೆಲ್ ದರ ಕೂಡ ಶತಕ ಬಾರಿಸಿ ಮುನ್ನುಗ್ಗುತ್ತಿದ್ದು, ಗ್ರಾಹಕರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.
ಅಡುಗೆ ಎಣ್ಣೆ, ದಿನಸಿ, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಹೈರಾಣಾಗಿದ್ದಾರೆ.