ಬೆಂಗಳೂರು: ರಾಜ್ಯದಲ್ಲಿ ಕೊರೋನಾ ತಡೆಗೆ ಮೇ 24 ರವರೆಗೆ ಲಾಕ್ ಡೌನ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸಬ್ ರಿಜಿಸ್ಟ್ರಾರ್ ಕಚೇರಿಗಳ ಚಟುವಟಿಕೆ ಸ್ಥಗಿತಗೊಳಿಸಲಾಗಿದೆ.
ಮೇ 23 ರವರೆಗೆ ರಾಜ್ಯದ ಎಲ್ಲಾ ಜಿಲ್ಲಾ ನೋಂದಣಿ ಮತ್ತು ಉಪನೋಂದಣಿ ಕಚೇರಿಗಳಲ್ಲಿ ಚಟುವಟಿಕೆ ಸ್ಥಗಿತಗೊಳಿಸಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಸಬ್ ರಿಜಿಸ್ಟ್ರಾರ್ ಕಚೇರಿಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಕೇಂದ್ರಸ್ಥಾನದಲ್ಲಿ ಹಾಜರಿರಬೇಕೆಂದು ತಿಳಿಸಲಾಗಿದೆ.